Thursday, 18th July 2024

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿಗಳು…ಪೋಸ್ಟ್ ವೈರಲ್‌…

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಹೇಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್ ಒಂದು ಎಲ್ಲರ ಗಮನ ಸೆಳೆದಿದೆ.

ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಆ ಸ್ಥಾನವನ್ನು ಅಲಂಕರಿಸಿದ್ದಾರೆ. ಇದರ ಮಧ್ಯೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಆಪ್ತ ಸಹಾಯಕ ಕಿರಣ್ ಬಡಿಗೇರ ಎಂಬವರು, ಮುರುಗೇಶ್ ನಿರಾಣಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಪೋಸ್ಟ್ ಒಂದನ್ನು ಹಾಕಿಸಿದ್ದು, ಅದರಲ್ಲಿ ಮುಂದಿನ ಮುಖ್ಯಮಂತ್ರಿಗಳು ಹಾಗೂ ಜಮಖಂಡಿ ಜಿಲ್ಲೆಯ ಕನಸನ್ನು ನನಸು ಮಾಡುವ ನಾಯಕ ಎಂದು ಬಣ್ಣಿಸಲಾಗಿದೆ.

ಕಾಂಗ್ರೆಸ್ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಪರೋಕ್ಷ ಟ್ವೀಟ್’ಗೆ ಮಾಡಿದ್ದು, ಅದು ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅದನ್ನು ತೆರವುಗೊಳಿಸಲಾಗಿದೆ. ಆದರೆ ಮುರುಗೇಶ್ ನಿರಾಣಿ ಅವರು ಬೀಳಗಿ ಮತಕ್ಷೇತ್ರವನ್ನು ಬಿಟ್ಟು ಪಂಚಮಸಾಲಿ ಸಮುದಾಯ ಹೆಚ್ಚಿರುವ ಜಮಖಂಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಾ ಎಂಬ ಕುತೂಹಲಕ್ಕೆ ಈ ಪೋಸ್ಟರ್ ಈಗ ಕಾರಣವಾಗಿದೆ.

error: Content is protected !!