Tuesday, 16th April 2024

ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ, ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ. ಸೋಂಕು ನಿಯಂತ್ರಣಕ್ಕೆ ಇದು ಅನಿವಾರ್ಯ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಕೊಂಡರು. ಕರೊನಾ ಎರಡನೆ ಅಲೆ ಹೊಸ್ತಿಲಲ್ಲಿದ್ದೇವೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ನಮಗೆ ಬೇರೆ ದಾರಿ ಇಲ್ಲ ಎಂದು ತಿಳಿಸಿದರು.

ಸರ್ಕಾರ ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದ್ದಾಗ ಎಲ್ಲವನ್ನೂ ಅನ್‍ಲಾಕ್ ಮಾಡಿದ್ದೆವು. ಈಗ ಪ್ರತಿನಿತ್ಯ ಐದು ಸಾವಿರ ಪ್ರಕರಣಗಳು ಬರುತ್ತಿವೆ. ಬೆಂಗಳೂರಿನಲ್ಲೇ ಮೂರು ಸಾವಿರ ಪ್ರಕರಣಗಳು ದಾಖಲಾಗಿವೆ. ತಾಂತ್ರಿಕ ಸಲಹಾ ಸಮಿತಿ ಜೂನ್ ಅಂತ್ಯದವರೆಗೂ ಇರಲಿದೆ ಎಂಬ ಹೇಳಿದೆ. ಈಗ ಕ್ರಮ ಕೈಗೊಳ್ಳದಿದ್ದರೆ ಹೆಚ್ಚು ಕಡಿಮೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಿನಿಮಾ ನೂರರಷ್ಟು ಬಿಡಬೇಕು ಎಂಬ ನಟ ಪುನೀತ್ ಮನವಿ ವಿಚಾರವಾಗಿ, ನಮಗೆ ವಲಯವಾರು ಎಲ್ಲರ ಬಗ್ಗೆ ಗೌರವ, ಅಭಿಮಾನ ಇದೆ. ಎಲ್ಲವೂ ತೆಗೆದರೆ, ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಚುನಾವಣೆಗೂ ಮಾರ್ಗಸೂಚಿ ಅನ್ವಯವಾಗಲಿದೆ. ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!