Wednesday, 24th April 2024

ಉಚಿತ ಬಸ್ ಪಾಸ್ ನೀಡಲು ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ: ಶ್ರೀರಾಮುಲು

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದರು.

ವಿಧಾನಪರಿಷತ್‍ನಲ್ಲಿ ಜೆಡಿಎಸ್‍ನ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿ, ಒಂದು ಲಕ್ಷ ಎಸ್ಸಿ-ಎಸ್ಟಿ ವಿದ್ಯಾರ್ಥಿ ಗಳಿಗೆ ಉಚಿತ ಬಸ್‍ಪಾಸ್ ನೀಡಲಾಗಿದೆ. ಹಿಂದುಳಿದ ವರ್ಗಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬ ಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಬೇಕೆಂದು ಸದಸ್ಯರು ಬೇಡಿಕೆ ಮಂಡಿಸಿದ್ದಾರೆ. ಆದರೆ, ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.

ಈ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ ಅವರು, ಯಾರಿಗೋ ಲಾಭ ಮಾಡಿಕೊಡುವ ಸಲುವಾಗಿ ಸೇವಾ ಸಿಂಧು ಅಪ್ಲಿಕೇಷನ್ ಮಾಡಲಾಗಿದೆ. ಅದರಲ್ಲಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು 150 ರೂ. ಪಾವತಿಸಬೇಕು. ಪ್ರತಿ ವರ್ಷ ಪಾಸ್ ನವೀಕರಣಕ್ಕೆ ಹೊಸ ಪ್ರಕ್ರಿಯೆಗಳನ್ನೇ ಪಾಲನೆ ಮಾಡಬೇಕು ಎಂದರು.

ಕಾಂಗ್ರೆಸ್‍ನ ಗೋವಿಂದರಾಜು ಅವರ ಪ್ರಶ್ನೆಗೆ, ರಾಜ್ಯದ ಗಡಿ ಭಾಗಗಳಲ್ಲಿ 15 ಸಾರಿಗೆ ತಪಾಸಣಾ ಕೇಂದ್ರ ಗಳನ್ನು ಸ್ಥಾಪಿಸಲಾಗಿದೆ. ಅವುಗಳಿಗೆ 37 ಹುದ್ದೆಗಳ ಪೈಕಿ 8 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. 21 ಹುದ್ದೆಗಳು ಖಾಲಿ ಇವೆ. ಸಾರಿಗೆ ಇಲಾಖೆಗೆ 2781 ಹುದ್ದೆಗಳು ಮಂಜೂರಾಗಿದ್ದು, 1252 ಮಂದಿ ಕೆಲಸ ಮಾಡುತ್ತಿದ್ದಾರೆ.

1529 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಕೆಪಿಎಸ್‍ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!