Sunday, 19th May 2024

ಯುಗಾದಿ: ಮಲೆಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ದರ್ಶನವನ್ನು ನಿಷೇಧಿಸಲಾಗಿದೆ.

ಏ.10ರಿಂದ 13ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದ್ದು, ದೇವರ ದರ್ಶನ, ಮಹಾರಥೋತ್ಸವ, ವಿಶೇಷ ಪೂಜಾ ಕಾರ್ಯಗಳು ಪ್ರತಿ ವರ್ಷ ನಡೆಯುತ್ತಿದ್ದವು. ಜನಪ್ರತಿನಿಗಳು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದರು.

ಆದರೆ ಈ ಬಾರಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಪ್ರತಿ ವ್ಯಕ್ತಿಯಿಂದ ವ್ಯಕ್ತಿಗೆ 3.25 ಚ.ಮೀ ಅಂತರ ಕಾಯ್ದುಕೊಳ್ಳಬೇಕಿದೆ. 200 ಜನರ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಜಾತ್ರೆಯಲ್ಲಿ ಭಾಗವಹಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್ ಬಳಸಬೇಕೆಂದು ಸೂಚನೆ ನೀಡಲಾಗಿದೆ.

ದೇವರ ದರ್ಶನಕ್ಕೆ ಗರಿಷ್ಠ 20 ನಿಮಿಷಗಳ ಅವಕಾಶ ಕಲ್ಪಿಸಲಾಗುತ್ತದೆ. ಸಾಮೂಹಿಕ ಪ್ರಸಾದ ತಯಾರಿಕೆ ಮತ್ತು ವಿತರಣೆಗೂ ಕೂಡ ಕಡಿವಾಣ ಹಾಕಲಾಗಿದೆ ಎಂದು ಜಿಲ್ಲಾಕಾರಿ ಡಾ.ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನದ ಅರ್ಚಕರು, ಸಿಬ್ಬಂದಿ, ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ಜನಪ್ರತಿನಿಗಳಿಗೆ ಮಾತ್ರ ಅವಕಾಶ ನೀಡ ಲಾಗಿದ್ದು, ಜಾತ್ರೆಯನ್ನು ಸರಳವಾಗಿ ಆಚರಿಸುವಂತೆ ತಾಕೀತು ಮಾಡಲಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!