Sunday, 19th May 2024

ಜ.19 ರಂದು ಬೆಂಗಳೂರಿಗೆ ಪ್ರಧಾನಿ ಭೇಟಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜ.19 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿ ರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ.

ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಸಂದರ್ಭದಲ್ಲಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ಜ.19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆ ಮಾಡಲಾಗಿದೆ.

ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಗಳು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಇದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.

Leave a Reply

Your email address will not be published. Required fields are marked *

error: Content is protected !!