Friday, 26th July 2024

ಇಂದಿನಿಂದ 5 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ಸೇರಿ ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಿಸಿಲ ಧಗೆ ರಾಜ್ಯದಲ್ಲಿ ನಿಧಾನವಾಗಿಯೇ ಹೆಚ್ಚುತ್ತಿರುವ ಸಂದರ್ಭ ದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಸಮುದ್ರಗಳಲ್ಲಿ ಮೆಲ್ಮೈ ಸುಳಿ ಕಾಣಿಸಿಕೊಂಡಿರೋ ಕಾರಣ ರಾಜ್ಯದ ನಾನಾ ಕಡೆ ಇಂದಿನಿಂದ 5 ದಿನ ಮಳೆಯಾ ಗುವ ಸಾಧ್ಯತೆ ಎಂದು ಮಾಹಿತಿ ನೀಡಿದೆ.

ಮಾ.14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಾಗೂ ಮಾರ್ಚ್‌ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಸಹ ಮಾ.17 ಹಾಗೂ 18 ರಂದು ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ, ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್‌, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವೆಡೆ ಮಾ.16 ರಿಂದ ಮಾ.18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

Read E-Paper click here

error: Content is protected !!