Saturday, 27th July 2024

ಪ್ರವರ್ಗ 2ಎ ಮೀಸಲಾತಿ: ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿಗೆ ಆದೇಶಿಸಿದ ಆಯುಕ್ತ ಪಂತ್‌

ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಸೌಲಭ್ಯ ಘೋಷಣೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಫೆ.22ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ರಾಜಭವನ, ಕರ್ನಾಟಕ ಉಚ್ಛ ನ್ಯಾಯಾಲಯ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳು ಇದ್ದು, ರ್ಯಾಲಿಯ ಸಮಯದಲ್ಲಿ ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಪಾಸ್ತಿಗಳಿಗೆ ನಷ್ಟ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟು ಮಾಡಬಹುದಾದ ಕೃತ್ಯಗಳಲ್ಲಿ ತೊಡಗುವಂತಹ ಸಂಭವನೀಯತೆ ಇರುವುದಾಗಿ ಮಾಹಿತಿ ತಿಳಿದುಬಂದಿದೆ.

ಯಾವುದೇ ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದು, ಯಾವುದೇ ಶಸ್ತ್ರಗಳು, ದೊಣ್ಣೆಗಳು ಮತ್ತಿತರ ವಸ್ತುಗಳನ್ನು ಒಯ್ಯುವುದು, ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು ಮತ್ತು ಶೇಖರಿಸುವುದನ್ನು ನಿಷೇಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!