Sunday, 28th April 2024

ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಸಿಬಿಐ ವಶಕ್ಕೆ

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ರನ್ನು ಒಂದು ದಿನ ಸಿಬಿಐ ವಶಕ್ಕೆ ನೀಡಿ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಅನಾರೋಗ್ಯದಿಂದಾಗಿ ಆಸ್ಪತ್ರೆಗೂ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಪ್ರಕರಣದಲ್ಲಿ ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಸಿಬಿಐ ಕೋರಿಕೆಯ ಮೇರೆಗೆ 1 ದಿನಗಳ ವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ. ಅಲ್ಲದೇ ಡಿ.4ಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!