Sunday, 28th April 2024

ರೋಷನ್ ಬೇಗ್‌ಗೆ ಜಾಮೀನು ಮಂಜೂರು

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ನ್ಯಾಯಂಗ ಬಂಧನದಲ್ಲಿದ್ದ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಮುಂದಿನ ದಿನಗಳಲ್ಲಿ ತನಿಖೆಗೆ ಸಹಕರಿಸುವಂತೆ ಕೋರ್ಟ್‌ ಸೂಚನೆ ನೀಡಿದೆ.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಐಎಂಎ ವಂಚನೆ ಪ್ರಕರಣದಲ್ಲಿ ಕಳೆದ ಇತ್ತೀಚೆಗಷ್ಟೇ ಸಿಬಿಐ ನಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಲಾಗಿತ್ತು. ಇಂತಹ ಮಾಜಿ ಸಚಿವರು ಜಾಮೀನಿಗಾಗಿ ಸಿಬಿಐ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!