Saturday, 27th April 2024

ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ರೋಷನ್ ಬೇಗ್ ಅವರನ್ನು ವಿಶೇಷ ನ್ಯಾಯಾಲಯ ಸಿಬಿಐ ವಶಕ್ಕೆ ಒಪ್ಪಿಸಲು ಬುಧವಾರ ಆದೇಶ ನೀಡಿತ್ತು.

ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಬೇಗ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಇದರಿಂದ ಸಿಬಿಐ ಅಧಿಕಾರಿಗಳು ಬೇಗ್ ಅವರನ್ನು ತಮ್ಮ ವಶಕ್ಕೆ ಪಡೆಯಲು ತೆರಳಿದರೂ ಬರಿಗೈಯಲ್ಲಿ ಬರುವಂತಾಗಿದೆ.

ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕವೇ ಸಿಬಿಐ ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!