Thursday, 18th April 2024

ಸೆಪ್ಟೆಂಬರ್ 13 ರಿಂದ ವಿಧಾನಮಂಡಲದ ಅಧಿವೇಶನ

Bommai

ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಮುಹೂರ್ತ ಫಿಕ್ಸ್ ಆಗಿದೆ.

ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ರಾಜ್ಯ ವಿಧಾನ ಮಂಡಲದ ಅಧಿವೇಶನ ತಡವಾಗಿತ್ತು. ಇದೇ ಕಾರಣದಿಂದಾಗಿ, ವಿಪಕ್ಷಗಳು ಅಧಿವೇಶನ ಕರೆಯೋದಕ್ಕೂ ಆಗ್ರಹಿಸಿದ್ದರು. ಕೊನೆಗೂ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ, ವಿಧಾನ ಮಂಡಲದ ಅಧಿವೇಶನ ಕರೆಯಲು ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!