Friday, 2nd June 2023

ಜೆಡಿಎಸ್ ತೊರೆದ ಮಾಜಿ ಶಾಸಕ ವೈ ಎಸ್ ವಿ ದತ್ತ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆದಿದ್ದಾರೆ.
ತಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಖಚಿತಪಡಿಸಿದ್ದಾರೆ. ನನಗೆ ಈಗ 70 ವರ್ಷವಾಗಿದೆ. 2023 ನನ್ನ ಕೊನೆಯ ಚುನಾವಣೆ. ಕಡೂರು ಕ್ಷೇತ್ರದ ಜನತೆಯ ನಿರ್ಧಾರಕ್ಕೆ ನನ್ನ ರಾಜಕೀಯ ನಿವೃತ್ತಿ ವಿಚಾರವನ್ನು ಬಿಟ್ಟಿದ್ದೇನೆ.

ಕ್ಷೇತ್ರದಲ್ಲಿ ಜೆಡಿಎಸ್ ಭವಿಷ್ಯ ಮಂಕಾಗಿದೆ. ಕಾರ್ಯಕರ್ತರಿಗೆ ಬೇರೆ ಕಡೆ ವ್ಯವಸ್ಥೆ ಆಗಬೇಕು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ.

ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ.

ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ.  ಕಾಂಗ್ರೆಸ್ ಪಕ್ಷ ಸೇರ್ಪಡೆ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ.

ಮೂಲದ ಪ್ರಕಾರ ಅವರು ಇದೇ ಡಿಸೆಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

error: Content is protected !!