Tuesday, 23rd April 2024

ಬೆಣ್ಣೆ ಇಡ್ಲಿ ಶಿವಪ್ಪ ನಿಧನ

ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀರಂಗಪಟ್ಟಣ ತಾಲೂಕು ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿ ಶಿವಪ್ಪ ಶುಕ್ರವಾರ ನಿಧನರಾಗಿದ್ದಾರೆ.

ಶಿವಪ್ಪ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಮಧ್ಯೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆದು ಸ್ಕೂಟರ್‌ನಿಂದ ಬಿದ್ದು ಗಾಯ ಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.

ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಬೆಣ್ಣೆ ಇಡ್ಲಿ ಶಿವಪ್ಪ ಕೊನೆಯುಸಿರೆಳೆದಿದ್ದಾರೆ. ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿದೆ.

ರಾಮನಗರದವರಾದ ಶಿವಪ್ಪ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದರು. ಚಾಮರಾಜ ನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದ್ದರು.

ಶಿವಪ್ಪ ಅವರ ಹೊಟೇಲ್‌ನಲ್ಲಿ ಟೀ ಕುಡಿಯಲು ಜನ ತಂಡೋಪ ತಂಡವಾಗಿ ಬರುತ್ತಿದ್ದರು. ಪ್ರೇರಿತರಾದ ಶಿವಪ್ಪ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ಅವರ ಕೈರುಚಿಯ ಖ್ಯಾತಿ ಸುತ್ತಮುತ್ತಲಿನ ಜಿಲ್ಲೆಗಳಿಗೆ ಹಬ್ಬಿದ್ದು, ಬೆಣ್ಣೆ ಇಡ್ಲಿ ಶಿವಪ್ಪ ಎಂದೇ ಜನಪ್ರಿಯತೆ ಪಡೆದರು. ಶಿವಣ್ಣ ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೆ ಕಾದು ಸವಿದು ಹೋಗುತ್ತಿದ್ದರು.

ಶ್ರೀರಂಗಪಟ್ಟಣ ಹಾಗೂ ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೊಟೇಲ್ ಮೈಸೂರು ಭಾಗದಲ್ಲಿ ಹೆಸರುವಾಸಿ ಯಾಗಿತ್ತು. 

error: Content is protected !!