Wednesday, 24th April 2024

ರಾಯಚೂರಿಗೆ ಎಂಟ್ರಿಯಾದ ಭಾರತ್ ಜೋಡೋ…

 

ರಾಯಚೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ.

ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶದಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್‍ಗಾಂಧಿ ಕಾರ್ಮಿಕರು, ಕೃಷಿಕರು, ಪೌರ ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ಹಲವಾರು ಜನರೊಂದಿಗೆ ಸಂವಾದ ನಡೆಸಿದರು.

ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದೆ.

ರಾಜ್ಯದಲ್ಲಿ ಸೆ.30 ರಿಂದ ಅ.15ರ ವರೆಗೆ ನಿರಂತರವಾಗಿ ನಡೆದ ಪಾದಯಾತ್ರೆ ಮತ್ತು ಎರಡನೆ ಹಂತದಲ್ಲಿ ಈಗ ನಡೆಯುತ್ತಿರುವ ಯಾತ್ರೆ ಕೊನೆ ಹಂತ ತಲುಪಿದ್ದು, ಇಲ್ಲಿಂದ ತೆಲಂಗಾಣದತ್ತ ಪ್ರಯಾಣಿಸಲಿದೆ.

ರಾಜ್ಯದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಮಂತ್ರಾಲಯದಿಂದಲೇ ರಾಹುಲ್‍ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದರು. ರಾಹುಲ್‍ಗಾಂಧಿ ಮಂತ್ರಾಲಯದ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಯುವ ಕಾರ್ಯಕರ್ತರು ರಾಹುಲ್‍ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ತಮ್ಮ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು. ಆಂಧ್ರ ಪ್ರದೇಶದಿಂದ ರಾಯಚೂರು ಮಾರ್ಗದವರೆಗೂ ಸಾವಿರಾರು ಜನ ಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದಲ್ಲಿ ಕಾರ್ಯಕರ್ತರು, ಮುಖಂಡರ ಜತೆ ರಾಹುಲ್ ಗಾಂಧಿ ಸಮಾಲೋಚನೆ ನಡೆಸಲಿದ್ದಾರೆ.

error: Content is protected !!