Wednesday, 17th July 2024

ಇನ್ನೂ ಪತ್ತೆಯಾಗದ ಮೃತದೇಹ: ಡ್ರೋನ್ ಬಳಕೆಗೆ ನಿರ್ಧಾರ

ಬೀದರ್: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ 3 ದಿನ ಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿ ದ್ದಾರೆ.

3 ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ 25 ವರ್ಷದ ಮಲ್ಲಪ್ಪ ಶರಣಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಇದೀಗ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ ಕ್ಯಾಮೆರಾ ಬಳಕೆ ಮಾಡಲಾಗುತ್ತಿದೆ. ಡ್ರೋನ್ ಕ್ಯಾಮೆರಾ ಬಳಸಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕಳೆದ 3 ದಿನಗಳಿಂದ ಶೋಧ ಕಾರ್ಯ ಮಾಡಿದರೂ ಮೃತ ದೇಹ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಗುರುವಾರ ಬೀದರ್ ಪೊಲೀಸ್ ಇಲಾಖೆ ಡ್ರೋನ್ ಮೊರೆ ಹೋಗಿದೆ.

Leave a Reply

Your email address will not be published. Required fields are marked *

error: Content is protected !!