Friday, 26th July 2024

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಮತ್ತೆ ಆರಂಭ

ಬೆಳಗಾವಿ: ಕೊಲ್ಹಾಪುರದಲ್ಲಿ ಗಲಾಟೆ ನಡೆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಮತ್ತೆ ಆರಂಭವಾಗಿದೆ.

ಮಹಾರಾಷ್ಟ್ರ ಗಡಿ ನಿಪ್ಪಾಣಿವರೆಗೆ ಮಾತ್ರ ಕರ್ನಾಟಕದ ಬಸ್​ಗಳು ಸಂಚರಿಸುತ್ತಿದ್ದವು. ಇದೀಗ ಕೊಲ್ಹಾಪುರ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದು, ಬಸ್ ಕಾರ್ಯಾಚರಣೆ ಆರಂಭವಾಗಿದೆ.

ಕೊಲ್ಹಾಪುರದಲ್ಲಿ ಕನ್ನಡ ನಾಮಫಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದರು. ಕನ್ನಡ ನಾಮ ಫಲಕ ಹಾಕಿದರೆ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದರು. ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿ, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದರು.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ರಾಜ್ಯಗಳ ನಡುವೆ ಬಸ್​ ಸಂಚಾರ ಸ್ಥಗಿತಗೊಳಿಸಲಾಗಿತ್ತು. 3 ದಿನಗಳಿಂದ ಸ್ಥಗಿತಗೊಂಡಿದ್ದ ಬಸ್‌ ಸಂಚಾರ ಸಧ್ಯ ಮತ್ತೆ ಆರಂಭವಾಗಿದೆ.

Leave a Reply

Your email address will not be published. Required fields are marked *

error: Content is protected !!