Wednesday, 24th April 2024

ಬಿವೈ ವಿಜಯೇಂದ್ರ ಮುನ್ನಡೆ

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ  ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಕೆಲವು ನಿಮಿಷಗಳ ಹಿಂದಷ್ಟೇ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಸುಮಾರು 500 ಮತಗಳ ಅಂತರದಿಂದ ಮುಂದಿದ್ದರು. ಬಳಿಕ ಬಿವೈ ವಿಜಯೇಂದ್ರ 5176 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ 3465 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ 312 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ.

ಬಿ.ವೈ. ವಿಜಯೇಂದ್ರ ಮಾತನಾಡಿ, “2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ ಸ್ವಾಭಿಮಾನಿ ಮತದಾರರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಬಿ.ಎಸ್.ಯಡಿ ಯೂರಪ್ಪರನ್ನುಗೆಲ್ಲಿಸಿದ್ದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ” ಎಂದು ಹೇಳಿದ್ದರು.

error: Content is protected !!