Tuesday, 27th February 2024

ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವು

ಚಾಮರಾಜನಗರದಲ್ಲಿ ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಇಂದು ಮೃತಪಟ್ಟಿದ್ದಾಳೆ.

ಚಾಮರಾಜನಗರ : ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂ ಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂ‌.26 ರಂದು ಜಿಲ್ಲೆಯಹನೂರು ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದ ರಾಮು ಹಾಗೂ ಲಲಿತಾ ಎಂಬವರ ಪುತ್ರಿ ಸುಶೀಲಾ ತಮ್ಮ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಚಿರತೆ ಆಟವಾಡುತ್ತಿದ್ದ ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಮಗುವಿನ ಚೀರಾಟ ಕೇಳಿದ ಪೋಷಕರು ಹಾಗೂ ಗ್ರಾಮಸ್ಥರು ಯಾರೋ ಕಳ್ಳರು ಬಂದಿ ದ್ದಾರೆ. ಮಗುವನ್ನು ಹೊತ್ತುಕೊಂಡು ಹೋಗುತ್ತಿದ್ದಾರೆ ಎಂದು ಭಾವಿಸಿ ದೊಣ್ಣೆಗಳನ್ನು ಹಿಡಿದುಕೊಂಡು ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರ ಕೂಗಾಟ – ಚೀರಾಟ ದಿಂದ ಬೆದರಿದ ಚಿರತೆ ಮಗುವನ್ನು ಸ್ಥಳದಲ್ಲೇ ಬಿಟ್ಟು ಕಾಡಿನತ್ತ ಪರಾರಿಯಾಗಿತ್ತು.

ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ 108 ಆಂಬ್ಯುಲೆನ್ಸ್​ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ತುರ್ತು ವೈದ್ಯಕೀಯ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ ಕಾಮಗೆರೆ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದವಡೆ ಮೂಳೆ ಮುರಿದಿದ್ದರಿಂದ ಮುಖ ಊದಿ ಕೊಂಡಿತ್ತು. ಕಳೆದ 14 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಪರೇಷನ್ ಕೂಡ ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಅಸುನೀಗಿದ್ದಾಳೆ.

 

Leave a Reply

Your email address will not be published. Required fields are marked *

error: Content is protected !!