Friday, 21st June 2024

ಡಿ.22 ರಿಂದ 27ರ ತನಕ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ವಾರಾಂತ್ಯ ಮತ್ತು ಕ್ರಿಸ್‌ಮಸ್ ರಜೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಡಿಸೆಂಬರ್ 22 ರಿಂದ 27ರ ತನಕ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾಡಳಿತ ಈ ಕುರಿತು ಆದೇಶ ಹೊರಡಿಸಿದೆ.

ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಿರಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಡಿ.24, 25 ಮತ್ತು 26ರಂದು ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

error: Content is protected !!