Thursday, 25th April 2024

ಹಿರಿಯೂರಿನಲ್ಲಿ ನಾಳೆ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಚಿತ್ರದುರ್ಗ: ಹಿರಿಯೂರಿನಲ್ಲಿ ಫೆಬ್ರವರಿ 25 ರಂದು 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನಗರದ ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಡಾ. ವಿಎಂ ನಾಗೇಶ್ ಮಾಹಿತಿ ನೀಡಿದರು. ಹಾಗಾದರೆ ಕಾರ್ಯಕ್ರಮಕ್ಕೆ ಸಿದ್ಧತೆ ಹೇಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯೂರು ತಾಲೂಕಿನ ಸಿಎನ್ ಮಾಳಿಗೆ ಗ್ರಾಮದ ಡಾ. ಕರಿಯಪ್ಪ ಮಾಳಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಕರಿಯಪ್ಪ ಅವರು ಚಿತ್ರ ದುರ್ಗ ಸರ್ಕಾರಿ ಕಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಮ್ಮೇಳನದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ನೆರವೇರಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ್ ಮತ್ತು ನಗರ ಠಾಣೆ ಸಿಪಿಐ ಅಭಯ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ. ನಂತರ ವೇದಿಕೆಯ ಸಮ್ಮೇಳನದ ಉದ್ಘಾಟನೆಯನ್ನು ಸಾಹಿತಿ ಹಾಗೂ ಹೋರಾಟಗಾರ ಬಂಜಗೆರೆ ಜಯ ಪ್ರಕಾಶ್ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಗೋಷ್ಠಿಯಲ್ಲಿ ಕವಹಿತ್ರಿ ತಾರಿಣಿ ಶುಭದಾಯಿನಿ, ನಾಗಭೂಷಣ್, ನಟರಾಜ್ ಹಾಗೂ ಚಿತ್ತಯ್ಯ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಕವಿಗಳು, ಸಾಹಿತಿಗಳು ವಿವಿಧ ಕವಿತೆಗಳನ್ನು ವಾಚನ ಮಾಡಲಿದ್ದಾರೆ. ಹಾಗೆಯೇ ಈ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ವಹಿಸಲಿದ್ದಾರೆ.

ಈ ಸಾಹಿತ್ಯ ಸಮ್ಮೇಳನ ಒಂದು ದಿನ ಕಾರ್ಯಕ್ರಮವಾಗಿರುವುದರಿಂದ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಕಾರ್ಯಕ್ರಮ ಕುರಿತು ಲೋಕೇಶ್ ಆಗಸನಕಟ್ಟೆ ಮಾತನಾಡಲಿದ್ದಾರೆ.

error: Content is protected !!