Thursday, 20th June 2024

ಸಚಿವರ ವಿರುದ್ದ ಕಮಿಷನ್‌ ಆರೋಪ ಮಾಡಿದ್ದವನ ಶವ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​ಈಶ್ವರಪ್ಪ ವಿರುದ್ಧ ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಚಿವರ ವಿರುದ್ಧದ ಆರೋಪಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

ಉಡುಪಿಯ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಸಚಿವರ ವಿರುದ್ಧ ಡೆತ್ ನೋಟ್ ಬರೆದಿದ್ದರು. ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್‌ನ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ​​ಪ್​​ ಮೆಸೇಜ್ ಕಳಿಸಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.  ಮೆಸೇಜ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ ನೋಟ್ ಕಳಿಸಿದ್ದಾರೆ. ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಪೊಲೀಸರು ಮುಂದಾಗಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್. ಈಶ್ವರಪ್ಪ ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು.

 

error: Content is protected !!