Saturday, 27th July 2024

ಕೋವಿಡ್ ನಾಲ್ಕನೇ ಅಲೆ ಬಂದರೂ ನಿರ್ವಹಣೆ ಮಾಡುವ ಶಕ್ತಿ ನಮಗಿದೆ: ಡಾ ಕೆ. ಸುಧಾಕರ್

KSudhakar

ಬೆಂಗಳೂರು: ಕರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ಟೆಸ್ಟ್ ಗಳನ್ನು ಹೆಚ್ಚಳ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ ಕೆ. ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ನಾಲ್ಕನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ಶಕ್ತಿ ನಮಗಿದೆ. ನೆರೆ ರಾಜ್ಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಗೊಂಡಿವೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. ನೆರೆ ರಾಜ್ಯಗಳು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅವಲೋಕಿಸಿ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತೇವೆ. ಹಾಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ವಿಚಾರಗಳು ಪ್ರಸ್ತಾಪವಾಗಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ನಾಲ್ಕನೇ ಅಲೆ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಮೂರನೇ ಅಲೆಯಂತೆ ನಾಲ್ಕನೇ ಅಲೆ ಬಂದರೂ ಅದರಿಂದ ತೊಂದರೆ ತೀರಾ ಕಡಿಮೆ. ಈ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು. ನಾಲ್ಕನೇ ಅಲೆ ಬಗ್ಗೆ ಆತಂಕ ಪಡುವ ಅಗತ್ಯವೇ ಇಲ್ಲ,’ ಎಂದು ಜಯದೇವ ಹೃದ್ರೋಗ ಸಂಸ್ಥೆಯ ಡಾ. ಸಿ.ಎನ್. ಮಂಜುನಾಥ್ ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.

error: Content is protected !!