Friday, 2nd June 2023

ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆ ಶರಣಾದವರಾಗಿದ್ದಾರೆ.

ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ಅವಳಿ ಹೆಣ್ಣುಮಕ್ಕಳು ಕೂಡ ಇದ್ದಾರೆ ಎನ್ನಲಾಗಿದೆ.

ಕುಟುಂಬವು ಮಾ.27ರಂದು ಒಂದು ದಿನದ ಮಟ್ಟಿಗೆ ಲಡ್ಜ್‌ನಲ್ಲಿ ರೂಂ ಬುಕ್ ಮಾಡಿದ್ದು, ನಂತರ ಎರಡು ದಿ‌ನಕ್ಕೆ ವಿಸ್ತರಣೆ ಮಾಡಿಕೊಂಡಿದೆ.

ಮಾ.30ರಂದು ರೂಂ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಅನುಮಾನಗೊಂಡು ಅಲ್ಲಿನ ಸಿಬ್ಬಂದಿ ಬೆಳಗಿನ ಜಾವ ತಪಾಸಣೆ ನಡೆಸಿದ್ದು, ಆಗ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

 

error: Content is protected !!