Wednesday, 24th April 2024

ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನ

ಮಂಡ್ಯ: ಮಾಜಿ ಶಾಸಕ ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಎಚ್.ಡಿ.ಚೌಡಯ್ಯ (94) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ.

ಮಾಜಿ ಶಾಸಕ ಅನಾರೋಗ್ಯದಿಂದ ಮಂಡ್ಯದ ಹೊಳಲು ನಿವಾಸದಲ್ಲಿ ನಿಧನರಾದರು. ಇವರು ನಾಲ್ಕು ಬಾರಿ ಶಾಸಕರಾಗಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಜನಸೇವೆ ಮಾಡಿದ್ದಾರೆ. ಕಾವೇರಿ ಹೋರಾಟ ದಲ್ಲಿ ಮಾದೇಗೌಡರೊಂದಿಗೆ ಚೌಡಯ್ಯ ಪಾಲ್ಗೊಂಡಿದ್ದರು.

‘ನನ್ನ ಆತ್ಮೀಯರೂ, ಹಿತೈಶಿಗಳೂ ಆಗಿದ್ದ ಮಂಡ್ಯದ ಹಿರಿಯ ಮುತ್ಸದ್ದಿ ಹೆಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ’ ಎಂದು ಬರೆದಿದ್ದಾರೆ. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಇವರ ಅಗಲಿಕೆಯನ್ನು ಸಹಿಸಿ ಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಎಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ. ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್‌ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ಎಚ್.ಡಿ.ಚೌಡಯ್ಯ ಅವರ ಅಗಲಿಕೆಯೊಂದಿಗೆ ಪ್ರಾಮಾಣಿಕ, ಸೇವಾತತ್ಪರ, ನಿಸ್ವಾರ್ಥ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

error: Content is protected !!