Tuesday, 23rd April 2024

ಹಿರಿಯ ಸಾಹಿತಿ ಜಿ.ಎಸ್.ಆಮೂರ ವಿಧಿವಶ

ಧಾರವಾಡ : ಕನ್ನಡದ ಹಿರಿಯ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಅವರಿಗೆ ಸಂದಿದ್ದವು.

ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅತಿ ಅಗ್ರಮಾನ್ಯರಲ್ಲೊಬ್ಬರೆಂದು ಪರಿಗಣಿಸಲ್ಪಟ್ಟಿರುವ ಡಾ. ಅಮೂರ ರವರು, ಕರ್ನಾಟಕ ರಾಜ್ಯ ಸರ್ಕಾರ ಪ್ರದಾನ ಮಾಡುವ, ಪಂಪ ಪ್ರಶಸ್ತಿ ವಿಜೇತರು. ಕನ್ನಡ ಹಾಗೂ ಇಂಗ್ಲೀಷ್ ಸಾಹಿತ್ಯ ಪ್ರಾಕಾರಗಳಲ್ಲಿ ಪ್ರಕಾಂಡ ಪಂಡಿತರೆಂದು ಪರಿಗಳಿಸಲ್ಪಟ್ಟಿದ್ದರು.

ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ 4-5 ದಶಕ ಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾ ಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ೧೯೨೫ ರ ಮೇ ೮ ರಂದು. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ.

ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕ ರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು.

ದಿ ಕಾನ್ಸೆಪ್ಟ್‌ ಆಫ್‌ ಕಾಮಿಡಿ, ಮನೋಹರ ಮಳಗಾಂವ್‌ಕರ್, ಆದ್ಯರಂಗಾಚಾಯ್, ದಿ ಕ್ರಿಟಿಕಲ್‌ ಸ್ಪೆಕ್ಟ್ರಮ್‌, ಇಮೇಜಸ್‌ ಅಂಡ್‌ ಇಂಪ್ರೆಷನ್ಸ್‌, ಎ.ಎನ್‌. ಕೃಷ್ಣರಾವ್‌, ಕ್ರಿಯೇಷನ್ಸ್‌ ಅಂಡ್‌ ಟ್ರಾನ್ಸ್‌ ಕ್ರಿಯೇಷನ್ಸ್‌, ದತ್ತಾತ್ರೇಯ ರಾಮಚಂದ್ರಬೇಂದ್ರೆ, ಪರ್ಸೆಷನ್ಸ್‌ ಆಫ್‌ ಮಾಡರ್ನ್ ಲಿಟರೇಚರ್, ಮೊದಲಾದ ೧೪ ಕೃತಿಗಳ ಜೊತೆಗೆ ಕ್ರಿಟಿಕಲ್‌ ಎಸ್ಸೆಸ್‌ ಹ್ಯಾನ್‌ ಇಂಡಿಯನ್‌ ರೈಟಿಂಗ್‌ ಇನ್‌ ಇಂಗ್ಲಿಷ್‌ ಮುಂತಾದ ಆರು ಕೃತಿಗಳನ್ನೂ ಸಂಪಾದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!