Saturday, 18th May 2024

‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ: ಹೆಚ್‌ ಡಿ ರೇವಣ್ಣ ಬಂಧನ…!

ಬೆಂಗಳೂರು: ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರನ್ನು ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ.

ಇದರ ಬೆನ್ನಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ.

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್‌ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ಶುಕ್ರವಾರ ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ವಾದ ಆಲಿಸಿದ ನ್ಯಾಯಪೀಠವು, ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು.

ಶನಿವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಆರಂಭಿಸಿತು. ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಅವರು, ಇಲ್ಲಿ ಅತ್ಯಾಚಾರ ಪ್ರಕರಮ ಸಾಕ್ಷ್ಯ ವಿಚಾರಣೆ ನಡೆಯುತ್ತಿಲ್ಲ. ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕು. ಇದರಲ್ಲಿ ನಿರಾಧಾರವಾದ ಕಿಡ್ನಾಪ್ ಆರೋಪ ಮಾತ್ರವಿದೆ ಎಂಬುದಾಗಿ ಮನವಿ ಮಾಡಿದರು.

ಕಿಡ್ನ್ಯಾಪ್ ಕೇಸ್ ದಾಖಲಿಸಲಾಗಿದೆ. ನನ್ನ ಕಕ್ಷಿದಾರರಾದ ಹೆಚ್.ಡಿ ರೇವಣ್ಣ ವಿಚಾರದಲ್ಲಿ ಅನ್ವಯವಾಗುವುದಿಲ್ಲ. ಅಲ್ಲದೇ ಏಪ್ರಿಲ್.29ರಂದು ನಡೆದ ಘಟನೆಯ ಬಗ್ಗೆ ಮೇ.2ರಂದು ಎಫ್‌ಐಆರ್ ದಾಖಲಾಗಿದೆ.

ವಾದ ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೆಲ ಕಾಲ ಮುಂದೂಡಿತು. ಇದೇ ವೇಳೆ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!