Monday, 20th May 2024

28ರಂದು ಬೆಂಗಳೂರಿನಲ್ಲಿ ರೈತರ ಸಮಾವೇಶ: ಕೋಡಿಹಳ್ಳಿ ಚಂದ್ರಶೇಖರ್

ಕಲಬುರಗಿ: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದುಕೊಂಡ ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರವೂ ಅನುಸರಿಸಬೇಕು. ಈ ಕುರಿತು ಸರ್ಕಾರವನ್ನು ಒತ್ತಾಯಿಸಲು ಇದೇ 28ರಂದು ಬೆಂಗಳೂರಿನಲ್ಲಿ ರೈತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ಸಾಕಷ್ಟು ಭೂಮಿ ಖರೀದಿಗಳು ನಡೆಯು ತ್ತಿದ್ದು, ಬಡವರು ಭೂಮಿ ಕಳೆದು ಕೊಂಡು ಹಳ್ಳಿಗಳನ್ನು ಖಾಲಿ ಮಾಡುತ್ತಿದ್ದಾರೆ. ಎಪಿ ಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರಾಜ್ಯದ ಹಲವು ಎಪಿಎಂಸಿಗಳಿಗೆ ಬರಬೇಕಿದ್ದ ವರಮಾನದಲ್ಲಿ ಶೇ 90ರಷ್ಟು ಕಡಿಮೆಯಾಗಿದೆ. ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ಇದ್ದ ಕೇಂದ್ರೀಕೃತ ವ್ಯವಸ್ಥೆಗೆ ಪೆಟ್ಟು ಬಿದ್ದಿದೆ. ಜಾನುವಾರ ಸಂರಕ್ಷಣೆ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡಿದ್ದರಿಂದ ರೈತರ ಆರ್ಥಿಕತೆಗೆ ತೀವ್ರ ಪೆಟ್ಟು ಬಿದ್ದಿದೆ. ಬರೀ ಗೋವಿನ ಪೂಜೆ ಮಾಡಿದರೆ ಸಾಕಾಗದು. ರೈತರ ಆರ್ಥಕತೆ ಜಾನುವಾರುಗಳ ಮೇಲೆ ನಿಂತಿದ್ದು, ರಾಜ್ಯ ಸರ್ಕಾರದ ತಪ್ಪು ನಿರ್ಧಾರದಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟ ವನ್ನು ಎದುರಿಸುತ್ತಿದೆ’ ಎಂದು ಟೀಕಿಸಿದರು.

‘ಕೇಂದ್ರ ಸರ್ಕಾರವು ರೈತರ ಹೋರಾಟಕ್ಕೆ ಮಣಿದು ಕಾಯ್ದೆಗಳನ್ನು ವಾಪಸ್ ಪಡೆಯಿತು. ರಾಜ್ಯ ಸರ್ಕಾರವೂ ನೈತಿಕ ನೆಲೆಗಟ್ಟಿನಲ್ಲಿ ಈ ಬಗ್ಗೆ ವಿಚಾರಿಸಿ ತಂತಾನೇ ವಾಪಸ್ ಪಡೆಯಬೇಕಿತ್ತು. ಸುಗ್ರೀವಾಜ್ಞೆಗಳನ್ನು ತಂದಾಗಲೇ ನಾವು ವಿರೋಧ ವ್ಯಕ್ತಪಡಿಸಿದ್ದೆವು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಒತ್ತಾಯಿಸಿದ್ದೆವು.

ಕೋಡಿಹಳ್ಳಿ ಚಂದ್ರಶೇಖರ್, ‘ಉತ್ತರ ಪ್ರದೇಶ ಪರಿಸ್ಥಿತಿಯೇ ಬೇರೆ ಇದೆ. ಕರ್ನಾಟಕದ ಸ್ಥಿತಿಯೇ ಬೇರೆ ಇದೆ. ನಾವು ಇಲ್ಲಿಯವರೆಗೆ ಯಾವ ಪಕ್ಷದ ಪರ ಅಥವಾ ವಿರೋಧವಾಗಿ ಗುರುತಿಸಿಕೊಂಡಿಲ್ಲ. ಆದರೆ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ರೈತರ ಬದುಕನ್ನು ಮೂರಾಬಟ್ಟೆ ಮಾಡುತ್ತಿರುವುದರಿಂದ ಈ ಸರ್ಕಾರದ ನೀತಿಗಳನ್ನು ಟೀಕಿಸುತ್ತಿದ್ದೇವೆ’ ಎಂದರು.

error: Content is protected !!