Sunday, 24th September 2023

ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಹಾಕಿದ ಕೆಎಸ್‌ ಈಶ್ವರಪ್ಪ

ಲಬುರಗಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಕುರಿತು ಉಲ್ಲೇಖವಿರುವುದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕೆಎಸ್‌ ಈಶ್ವರಪ್ಪ ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಕಿಡಿಕಾರಿರುವ ಅವರು ಇದು ಮೊಹಮದ್ ಅಲಿ ಜಿನ್ನಾ ಪ್ರಣಾ ಳಿಕೆಯಾಗಿದೆ. ಬಜರಂಗ ದಳ ನಿಷೇಧ ಮಾಡುವುದು ಸರಿಯಲ್ಲ, ಗೋಹತ್ಯೆ ತಡೆಯಲು ಮುಂದಾಗಿರುವ ಬಜರಂಗ ದಳ ಬ್ಯಾನ್‌ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ. ಹೀಗಾಗಿ ನಾನು ಕಾಂಗ್ರೆಸ್‌ ಪ್ರಣಾಳಿಕೆಯನ್ನು ನಿಮ್ಮ ಮುಂದೆ ಸುಡುತ್ತಿದ್ದೇನೆ ಎಂದು ಬೆಂಕಿಕಡ್ಡಿ ಕೀರಿದರು.

ಕಾಂಗ್ರೆಸ್‌ ಗ್ಯಾರಂಟಿಗಳು ಬರೀ ಸುಳ್ಳಿನ ಕಂತೆಯಾಗಿದೆ. ಅದು ಬರೀ ಸುಳ್ಳಿನ ಭರವಸೆ ಗಳಾಗಿದೆ. ಈ ಪ್ರಣಾಳಿಕೆಯಿಂದ ಯಾವ ಪ್ರಯೋಜನ ಇಲ್ಲ. ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿರುವುದರಿಂದ ರಾಜ್ಯದ ಎಲ್ಲ ಹಿಂದೂಗಳಿಗೆ ನೋವಾಗಿದೆ. ಕಾಂಗ್ರೆಸ್‌ ಮನಸ್ಥಿತಿ ಏನು ಎಂದು ಜನರಿಗೆ ಗೊತ್ತಾಗಿದೆ.

ರಾಜ್ಯದಲ್ಲಿ ಎಲ್ಲ ಮುಸ್ಲಿಮರು ಒಂದೇ ರೀತಿ ಇಲ್ಲ. ಕೆಲವರು ಕಾಂಗ್ರೆಸ್‌ ವಿರೋಧಿಸುತ್ತಾರೆ. ಇದು ನೇರವಾಗಿ ಮುಸ್ಲಿಂ ಲೀಗ್‌ನ ಪ್ರಣಾಳಿಕೆಯಾಗಿದೆ. ಬಜರಂಗ ದಳ ಬ್ಯಾನ್‌ ಮಾಡುವ ಮೂಲಕ ಮುಸ್ಲಿಮರ ತುಷ್ಟೀಕರಣಕ್ಕೆ ಕಾಂಗ್ರೆಸ್‌ ಇಳಿದಿದೆ. ಹೀಗಾಗಿ ಎಲ್ಲ ರಾಷ್ಟ್ರಭಕ್ತ ನಾಗರಿಕರು ಈ ಕಾಂಗ್ರೆಸ್‌ ಪ್ರಣಾಳಿಕೆ ಬಹಿಷ್ಕರಿಸಲು ಮುಂದಾಗಬೇಕು ಎಂದು ಕೋರಿದರು.

error: Content is protected !!