Saturday, 13th July 2024

ಟಿಕೆಟ್ ಇಲ್ಲದೇ ಪ್ರಯಾಣ: 3754 ಮಂದಿಗೆ ದಂಡ, 6,54,738/-ರೂ ವಸೂಲಿ

ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸಿದ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ಎನ್ನುವಂತೆ, ಬರೋಬ್ಬರಿ 3754 ಮಂದಿಗೆ ದಂಡವನ್ನು ವಿಧಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮೇ-2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ 3708 ಪ್ರಕರಣಗಳನ್ನು ಪತ್ತೆಹಚ್ಚಿ, 3754 ಟಿಕೇಟ್ ರಹಿತ ಪ್ರಯಾಣಿಕರಿಂದ 6,54,738/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 88,429/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂಬುದಾಗಿ ಹೇಳಿದೆ.

Leave a Reply

Your email address will not be published. Required fields are marked *

error: Content is protected !!