Friday, 21st June 2024

ಅವಹೇಳನಕಾರಿ ಹೇಳಿಕೆ: ಸಚಿವ ತಂಗಡಗಿ ವಿರುದ್ಧ ಆಕ್ರೋಶ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಮಂಗಳವಾರ ಜೈ ಶ್ರೀರಾಮ್ ಘೋಷಣೆ ಕೂಗುತ್ತಲ್ಲೇ ಕಾಂಗ್ರೆಸ್ ಸಭೆಗೂ ನುಗ್ಗೋದಕ್ಕೆ ಯತ್ನಿಸಿದ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿತ್ತು. ಈ ಮಾಹಿತಿ ಅರಿತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿ ದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಚಿವ ಶಿವರಾಜ್ ತಂಡರಗಿ ಮೋದಿ ಬಗ್ಗೆ ನೀಡಿದ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಜೈ ಶ್ರೀ ರಾಮ್ ಎಂಬುದಾಗಿ ಘೋಷಣೆ ಕೂಗುತ್ತಲೇ ಕಾಂಗ್ರೆಸ್ ಸಭೆಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿ ದ್ದಾರೆ.

ಬಿಜೆಪಿ ಕಾರ್ಯಕರ್ತರು ಹೋಟೆಲ್ ನಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಭೆಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದ ಸಂದರ್ಭ ಸ್ಥಳ ದಲ್ಲಿದ್ದ ಪೊಲೀಸರು ನೂರಾರು ಕಾರ್ಯಕರ್ತರನ್ನು ಬಂಧಿಸಿ, ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!