Friday, 21st June 2024

ಶಾಸಕ ಅರವಿಂದ್ ಬೆಲ್ಲದ್’ಗೆ ಕೊರೊನಾ ಸೋಂಕು ದೃಢ

ಬೆಂಗಳೂರು : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ನೀಡಿರುವ ಬೆಲ್ಲದ್ ಅವರು, ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ. ಈ ಕುರಿತು ಸಾರ್ವಜನಿಕರು, ಮುಖಂಡರು & ಕಾರ್ಯಕರ್ತರು, ಬಂಧುಗಳು ಭಯಪಡುವ ಅಗತ್ಯವಿಲ್ಲ ಹಾಗೂ ದೂರವಾಣಿ ಸಂಪರ್ಕ ಮಾಡಬಾರದೆಂದು ವಿನಂತಿಸು ತ್ತೇನೆ.

ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಹಾಗೂ ಭಗವಂತನ ಆಶೀರ್ವಾದದಿಂದ ನಾನು ಕ್ಷೇಮ ವಾಗಿದ್ದೇನೆ. ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆ ಯಂತೆ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!