Sunday, 16th June 2024

ಕರೋನಾ ಮಹಾಸ್ಪೋಟ: 14 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ

covid

ಬೆಂಗಳೂರು: ರಾಜ್ಯದಲ್ಲಿ ಕರೋನಾ ಮಹಾಸ್ಪೋಟ ಮುಂದುವರೆದಿದೆ. ಬುಧವಾರ ಹೊಸದಾಗಿ 40,499 ಮಂದಿಗೆ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕಳೆದ ಮಂಗಳವಾರ 14 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆಯಾಗಿತ್ತು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 2,15,312 ಮಂದಿಗೆ ಕರೋನಾ ಪರೀಕ್ಷೆ ಮಾಡಲಾಗಿದೆ.  ಬೆಂಗಳೂರಿ ನಲ್ಲಿ 24,135 ಸೇರಿದಂತೆ ರಾಜ್ಯಾಧ್ಯಂತ 40,499 ಮಂದಿಗೆ ಕೋವಿಡ್ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ಇಂದು 40,499 ಮಂದಿಗೆ ಪಾಸಿಟಿವ್ ಬಂದ ಕಾರಣ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.18.80ಕ್ಕೆ ಏರಿಕೆ ಯಾಗಿದೆ. ಸಕ್ರೀಯ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ 1.84 ಲಕ್ಷ ಸೇರಿದಂತೆ ರಾಜ್ಯದಲ್ಲಿ 2,67,650ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಕಳೆದ 24 ಗಂಟೆಯಲ್ಲಿ ಸೋಂಕಿತರಾದ 23,209 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ ಬೆಂಗಳೂರಿನಲ್ಲಿ ಐವರು ಸೇರಿದಂತೆ, ರಾಜ್ಯದಲ್ಲಿ 21 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

error: Content is protected !!