Sunday, 19th May 2024

ಮುಂದಿನ ದಸರಾಕ್ಕೆ ಮುನ್ನ ಮೈಸೂರು-ಬೆಂಗಳೂರು ಹತ್ತು ಪಥದ ರಸ್ತೆಯ ಕಾಮಗಾರಿ ಪೂರ್ಣ: ಸಂಸದ ಪ್ರತಾಪ್ ಸಿಂಹ

ಮೈಸೂರು: ಮುಂದಿನ ದಸರಾಕ್ಕೆ ಮೊದಲೇ ಮೈಸೂರು-ಬೆಂಗಳೂರು ಹತ್ತು ಪಥದ ರಸ್ತೆಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.

ಬುಧವಾರ ಮೈಸೂರು ನಗರದ ಜಲದರ್ಶಿನಿಯಲ್ಲಿ ಮಾತನಾಡಿ, 2022ರ ದಸರಾ ಮುಂಚಿತವಾಗಿ ರಸ್ತೆ ಕಾಮ ಗಾರಿ ಪೂರ್ಣಗೊಳ್ಳಲಿದೆ. ಕರೋನಾ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ನಡೆಯೋ ದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರು ದಸರಾ ವೇಳೆಗೆ ರಸ್ತೆ ಸಿದ್ಧಗೊಳ್ಳಲಿದೆ ಎಂದರು.

ಸಂಪೂರ್ಣ ಕೇಂದ್ರ ಸರ್ಕಾರದ ಹಣದ ಮೂಲಕ 10 ಪಥದ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಒಂದು ರೂಪಾಯಿ ಯನ್ನು ಪಡೆದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಈ ಕಾಮಗಾರಿ ಪೂರ್ಣಗೊಂಡ ಬಳಿಕ ಒಂದೂವರೆ ಗಂಟೆಗೂ ಮುಂಚೆಯೇ ಬೆಂಗಳೂರು ತಲುಪಬಹುದು. 60 ಕಿ.ಮೀ. ಬೈಪಾಸ್ ಸಂಪೂರ್ಣ ಕಾಮಗಾರಿ ಆಗಿದೆ. ಜನವರಿವರೆಗೆ ಎಲ್ಲ ಬೈಪಾಸ್‌ಗಳನ್ನು ತೆರೆಯಲಾಗುವುದು ಎಂದು ಹೇಳಿದರು.

ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರಿಗೆ ಅನುಮಾನ ಇದೆಯೋ ಅಂತಹವರು ತಜ್ಞರನ್ನು ಕರೆದು ಕೊಂಡು ಬಂದು ಪರಿಶೀಲನೆ ಮಾಡಿಸಿಕೊಳ್ಳಿ”. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಇದು ಮೋದಿ ಸರ್ಕಾರದ ಯೋಜನೆ ಯಾಗಿದೆ” ಎಂದರು.

ಮೈಸೂರು-ನಂಜನಗೂಡು ನಡುವೆ 6 ಪಥದ ರಸ್ತೆ ನಿರ್ಮಾಣ ಮಾಡಬೇಕೆಂದು ಮನವಿ ಸಲ್ಲಿಸಲಾಗಿದ್ದು, ಸದ್ಯದಲ್ಲೇ ಅನುಮೋದನೆ ಸಿಗಲಿದೆ. ಮೈಸೂರಿನಿಂದ ಟಿ.ನರಸೀಪುರದವರೆಗೆ 4 ಪಥದ ರಸ್ತೆ ನಿರ್ಮಾಣ ಆಗಲಿದೆ” ಎಂದು ತಿಳಿಸಿದರು.

2022ರ ಮಾರ್ಚ್‌ನಲ್ಲಿ ಬೆಂಗಳೂರು-ಕೊಡಗು ನಡುವಿನ ಸುಸಜ್ಜಿತ ರಸ್ತೆ ಕಾಮಗಾರಿ ಆರಂಭವಾಗಲಿದ್ದು, 2024ಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿ ಪೂರ್ಣಗೊಂಡರೆ ಮೂರೂವರೆ ಗಂಟೆಯಲ್ಲಿ ಬೆಂಗಳೂರಿನಿಂದ ಕೊಡಗು ತಲುಪಬಹುದಾಗಿದೆ” ಎಂದರು.

 

Leave a Reply

Your email address will not be published. Required fields are marked *

error: Content is protected !!