Saturday, 15th June 2024

ನಂದಿ ವಿಗ್ರಹ ಭಗ್ನ

ಲಬುರಗಿ: ಶಹಾಬಾದ್ ತಾಲ್ಲೂಕಿನ, ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುತ್ತಗಾ ಗ್ರಾಮದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿನ ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಮಂಗಳವಾರ ಭಗ್ನಗೊಳಿಸಿದ್ದಾರೆ.

‘ಗ್ರಾಮದ ಹೊರವಲಯದ ಕಂಠಿ ಬಸವೇಶ್ವರ ದೇವಸ್ಥಾನದ ಗದ್ದುಗೆ ಮೇಲೆ ನಂದಿ ವಿಗ್ರಹ ಪ್ರತಿಷ್ಠಾಪಿಸಲಾಗಿತ್ತು.

ವಿಗ್ರಹದ ಮುಖವನ್ನು ಕಿತ್ತ ದುಷ್ಕರ್ಮಿಗಳು, ಗರ್ಭ ಗುಡಿಯ ಮುಂದೆ ಹಾಕಿ ವಿರೂಪಗೊಳಿಸಿದ್ದಾರೆ. ಬೆಳಿಗ್ಗೆ ದೇವರ ಪೂಜೆಗೆ ಬಂದಾಗ ಕೃತ್ಯ ನಡೆದಿರು ವುದು ಗೊತ್ತಾಗಿದೆ’ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಹಲಕರ್ಟಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿತ್ತು. ಈಗ ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದಾರೆ. ಈ ದುಷ್ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸ್ಥಳದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಹಾಬಾದ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು.

Leave a Reply

Your email address will not be published. Required fields are marked *

error: Content is protected !!