Saturday, 27th July 2024

ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

ಚಿಕ್ಕನಾಯಕನಹಳ್ಳಿ : ನಗರದ ಬೆಸ್ಕಾಂ ಕಚೇರಿಯಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಬೆಸ್ಕಾಂ ಎಇಇ ಗವಿರಂಗಯ್ಯ ಬಾಬಾ ಸಾಹೇಬರು ಭಾರತದ ಎಲ್ಲಾ ವರ್ಗಗಳ ಕಟ್ಟ ಕಡೆಯ ಜನರಿಗೂ ಸಂವಿಧಾನ ಸೌಲಭ್ಯಗಳನ್ನು ತಲುಪಿಸಲು ಅಪಾರವಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್ ಅವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳುವಂತಾಗಬೇಕು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಂಬೇಡ್ಕರ್ ಕುರಿತ ಧಾರವಾಹಿಯನ್ನು ಮೆಚ್ಚಿ ಅವರು ಅನುಭವಿಸಿದ ಸಂಕಷ್ಟಗಳ ಬಗ್ಗೆ ಮರುಗಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಸಮಾನವಾಗಿ ಬದುಕಿ, ನ್ಯಾಯದಾನ, ಅಧಿಕಾರ, ಪಡೆಯಲು ಹಾಗು ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ಅಂಬೇಡ್ಕರ್ ತ್ಯಾಗ ಮಾಡಿದ್ದಾರೆ. ಪ್ರತಿಯೊಬ್ಬ ಹಿಂದುಳಿದವನ ಸಾಧನೆಗೆ ಅಂಬೇಡ್ಕರ್ ಅವರ ಕೊಡುಗೆಯೇ ಕಾರಣವೆಂದರು.

ಪ.ಜಾತಿ ಮತ್ತು ಪ.ಪಂಗಡ ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಗೂಳೂರು ನಾಗರಾಜು ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕ ಪುಟ್ಟನರಸಯ್ಯ, ದಲಿತ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೊನ್ನೆಬಾಗಿ ಬಸವರಾಜು, ಸಹಾಯಕ ಲೆಕ್ಕಾಧಿಕಾರಿ ಧನರಾಜ್, ಅಂಬೇಡ್ಕರ್ ಅವರಿಗೆ ನುಡಿನಮನ ಸಲ್ಲಿಸಿದರು. ಆರೋಗ್ಯ ಇಲಾಖೆಯ ಮಂಜುನಾಥ್, ಶಿಕ್ಷಕರ ಸಂಘದ ಕಾರ್ಯದರ್ಶಿ ರಾಜಯ್ಯ, ಉಪನ್ಯಾಸಕ ಶೇಖರ್, ಸಹಾಯಕ ಅಧಿಕಾರಿಗಳಾದ ಯೋಗೇಂದ್ರ, ಆನಂದ್, ರಾಜಶೇಖರ್, ದಿವ್ಯ ಸೇರಿದಂತೆ ಬೆಸ್ಕಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!