Thursday, 22nd February 2024

ಹುಬ್ಬಳ್ಳಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿ ಯಾನ ಆರಂಭವಾಗಿದೆ.

ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರದಲ್ಲಿ ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕಾಂಗ್ರೆಸ್‌ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದೆ. ರಾಷ್ಟ್ರ ಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಕಲಾಪದಲ್ಲಿ ಬರಿ ಪೇ ಸಿಎಂ, ಪೇ ಫಾರ್ ಕಾಂಗ್ರೆಸ್ ಸದ್ದು ಗದ್ದಲ ಹಿನ್ನೆಲೆ ಹೀಗೆ ಬರಿ ಆರೋಪಗಳನ್ನು ಮಾಡುತ್ತಿ ರುವ ರಾಜಕಾರಣಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರ ಬಗ್ಗೆ ಕಾಳಜಿ ಹೊಂದಿರದ ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳಿಗೆ ಜನರು ಛೀಮಾರಿ ಹಾಕುತ್ತಿದ್ದಾರೆ.

ಮಂಡ್ಯ ರೈತರಿಂದ ‘ಪೇ ಫಾರ್ಮರ್‌’ ಅಭಿಯಾನ ಶುರು ಮಾಡಲಾಗಿತ್ತು. ಜಿಲ್ಲೆಯ ಸಂಜಯ್ ವೃತ್ತದಲ್ಲಿ ರೈತರು ಅಭಿಯಾನ ಕೈಗೊಂಡಿದ್ದು, ಒಂದು ಟನ್ ಕಬ್ಬಿಗೆ 4,500 ರೂಪಾಯಿ‌ ನಿಗದಿ ಮಾಡುವಂತೆ ರೈತರು ಒತ್ತಾಯಿಸಿದ್ದರು. ಇಲ್ಲದಿದ್ದರೆ ದಸರಾ ದಲ್ಲಿ ಹೆದ್ದಾರಿ ತಡೆದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಭಿಯಾನ ಮಾಡಿದ್ದು, ಸಕ್ಕರೆ ನಾಡಿನಲ್ಲಿ ಅಭಿಯಾನ ತೀವ್ರತೆ ಪಡೆದುಕೊಂಡಿತ್ತು.

ಬಳ್ಳಾರಿ ಬಿಜೆಪಿ ಘಟಕದಿಂದ ಸ್ಕ್ಯಾಮ್ ಸಿದ್ದರಾಮಯ್ಯ ಪೋಸ್ಟರ್ ಅಭಿಯಾನ ಆರಂಭಿಸಲಾಗಿತ್ತು. ನಗರದ ಗಡಗಿ ಚೆನ್ನಪ್ಪ ಸರ್ಕಲ್‌ನಲ್ಲಿ ಅಭಿಯಾನ ಹಮ್ಮಿಕೊಂಡಿದ್ದರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸ್ಕ್ಯಾಮ್ ರಾಮಯ್ಯ ಪೋಸ್ಟರ್‌ ಅನ್ನು ಅಂಟಿಸಿದರು.

error: Content is protected !!