Saturday, 23rd September 2023

19ರಂದು ಕಲಬುರಗಿಗೆ ಪ್ರಧಾನಿ ಭೇಟಿ: ಬಸ್‌ ಸಂಚಾರದಲ್ಲಿ ವ್ಯತ್ಯಯ

ಲಬುರಗಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ.

ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಸಮಾವೇಶಕ್ಕೆ ಜನರನ್ನು ಕರೆತರಲು ಬಸ್ ನಿಯೋಜನೆ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ವಿವಿಧ ಮಾರ್ಗದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರಲು 2,382 ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ನರೇಂದ್ರ ಮೋದಿ ಸಮಾವೇಶದ ಹಿನ್ನಲೆಯಲ್ಲಿ ಜನವರಿ 18ರ ಸಂಜೆಯಿಂದ 19ರ ಸಂಜೆಯವರೆಗೆ ವೇಗದೂತ, ಗ್ರಾಮೀಣ ಮತ್ತು ನಗರ ಸಾರಿಗೆ ಸಂಚಾರದಲ್ಲಿ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಇದಕ್ಕೆ ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.

ನರೇಂದ್ರ ಮೋದಿ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಆಗಮಿಸುತ್ತಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜನವರಿ 19ರಂದು ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳು ಆಗಮಿಸು ವರು. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಅವರ ಜೊತೆ ಯಾದಗಿರಿ ಜಿಲ್ಲೆಗೆ ತೆರಳಲಿದ್ದಾರೆ.

Read E-Paper click here

error: Content is protected !!