Sunday, 19th May 2024

ಏ.26 ರಂದು ಮತದಾನ: ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚುನಾವಣಾ ಆಯೋಗ ಸಂಬಂಧಪಟ್ಟ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ವಸತಿ ಗೃಹಗಳು, ಸಮುದಾಯ ಭವನಗಳು ಸೇರಿದಂತೆ ತಪಾಸಣೆ ನಡೆಸಲು ಸೂಚಿಸಿದೆ.

ಚೆಕ್ ಪೋಸ್ಟ್ ಗಳಲ್ಲಿ ಕೂಡ ತಪಾಸಣೆ ನಡೆಸಿ ಮತದಾರರಲ್ಲದವರನ್ನು ಪತ್ತೆಹಚ್ಚಿ ಹೊರಗೆ ಕಳುಹಿಸಲು ನಿರ್ದೇಶನ ನೀಡಿದೆ.ಈ 14 ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 12 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. 226 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!