ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಈ ಸಮಯದಲ್ಲಿ ಉಪಸ್ಥಿತರಿದ್ದರು.
ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿ, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತನಿದ್ದೆ” ಎಂದು ಹೇಳಿದ್ದಾರೆ.
ಉಪ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಮಾ.30 ಕೊನೆಯ ದಿನವಾಗಿದೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್, ಕಾಂಗ್ರೆಸ್ ಪಕ್ಷದಿಂದ ಆರ್. ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳು. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ ಎಂದು ಘೋಷಣೆ ಮಾಡಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ