ತುಮಕೂರು: ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಸಿಕ್ಕಿದ್ದು ಸಂಪೂರ್ಣ ವಿವರ ಪಡೆಯುತ್ತಿದ್ದೇನೆ. ಸರ್ಕಾರಿ ಬಸ್ಸುಗಳ ವ್ಯವಸ್ಥೆ ಸಾರಿಗೆಗೆ ಇಲ್ಲ ಎಂಬ ಮಾಹಿತಿ ಬಂದಿದೆ. ಇನ್ನು ಮುಂದೆ ಸರ್ಕಾರಿ ಬಸ್ಸಿನ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಖಾಸಗಿ ಬಸ್ಸಿನ ನೋಂದಣಿ ಸಂಖ್ಯೆ ಗೊತ್ತಾಗಿದ್ದು, ವೈ ಎನ್ ಹೊಸಕೋಟೆಯ ಸೀನಪ್ಪ ಎಂಬುವವರಿಗೆ ಸೇರಿದ ಬಸ್ಸಾಗಿದೆ, ವೈಎನ್ ಹೊಸಕೋಟೆಯಿಂದ ತುಮಕೂರಿಗೆ ಹೋಗುತ್ತಿದ್ದ ಎಸ್‍ವಿಟಿ ಖಾಸಗಿ ಬಸ್ಸು ಎಂದು ತಿಳಿದುಬಂದಿದೆ ಎಂದು ವಿವರಿಸಿ ದರು.