Saturday, 20th April 2024

ಕಳಸಾ ಬಂಡೂರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನೂತನ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಮ್‌ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ರೈತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಳಸಾ ಬಂಡೂರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು.

ನೂತನ ಕಾಯ್ದೆಗಳು ರೈತರಿಗೆ ಮಾರಕ ವಾಗಿವೆ.‌ ಅತಿವೃಷ್ಟಿ, ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರಿಗೆ ಮತ್ತಷ್ಟು ಸಂಕಷ್ಟ ಗಳನ್ನು ತಂದಿಡಲಿವೆ. ಕೆಲವೇ ಕೆಲವು ವ್ಯಾಪಾರಿಗಳು ಮತ್ತು ಬಂಡವಾಳ ಶಾಹಿಗಳು ಅಮಾಯಕರ ಸುಲಿಗೆ ಮಾಡಲಿದ್ದಾರೆ ಎಂದು ಆರೋಪಿಸಿದರು.

ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಜನ‌ ವಿರೋಧಿ ಕಾಯ್ದೆಗಳನ್ನು‌ ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹುಬ್ಬಳ್ಳಿ ತಹಶೀಲ್ದಾರ್ ಮುಖಾಂತರ ಸಿಎಂ‌ಗೆ ಮನವಿ ಸಲ್ಲಿಸಿದರು. ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರ ಸ್ಥಾಪನೆ ಹುಬ್ಬಳ್ಳಿಯಲ್ಲಿ ರೇಣುಕಾ ಶಿಕ್ಷಣ ಸಂಸ್ಥೆಯಿಂದ ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಸುನಿತಾ ದಿವಟೆ ತಿಳಿಸಿದ್ದಾರೆ.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗಣೇಶಪೇಟೆಯ ಕೊರವಿ ಪ್ಲಾಜಾದಲ್ಲಿ ಸೆಪ್ಟೆಂಬರ್ 25ರಂದು ನೂತನ ಕೇಂದ್ರಕ್ಕೆ ಚಾಲನೆ ನೀಡಲಾಗುವುದು ಎಂದಿದ್ದಾರೆ. ಕಳೆದ 15 ವರ್ಷಗಳಿಂದ ರೇಣುಕಾ ಶಿಕ್ಷಣ ಸಂಸ್ಥೆ ಯುವಕ- ಯುವತಿಯರಿಗೆ ವೃತ್ತಿಪರ ತರಬೇತಿ ನೀಡುತ್ತಿದೆ.‌ ರೇಣುಕಾ ಶಿಕ್ಷಣ ಸಂಸ್ಥೆಯ ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರ ಭಾರತ ಸರ್ಕಾರ ಮತ್ತು ಕರ್ನಾಟಕ ಸರಕಾರದ‌ ಮಾನ್ಯತೆ ಪಡೆದಿದೆ.

Leave a Reply

Your email address will not be published. Required fields are marked *

error: Content is protected !!