Friday, 26th July 2024

‘ನಿಗಮ, ಮಂಡಳಿ ನನಗೆ ಬೇಡವೇ ಬೇಡ’: ಸಿಂಧನೂರು ಶಾಸಕ

ರಾಯಚೂರು: ‘ನಿಗಮ, ಮಂಡಳಿ ನನಗೆ ಬೇಡವೇ ಬೇಡ’ ಎಂದು ರಾಯಚೂರಿನ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಸೇರಿದಂತೆ ಕೆಲ ಶಾಸಕರು ಪಟ್ಟು ಹಿಡಿದಿದ್ದಾರೆ.
ಜಿಲ್ಲೆಯ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದಲ್ಲಿ ಸ್ಥಾನ ಕೊಡಲು ಸಾಧ್ಯವಾಗದ ಕಾರಣ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮೂವರು ಶಾಸಕರನ್ನು ನಿಗಮ, ಮಂಡಳಿಗೆ ನೇಮಕ ಮಾಡಿದೆ.
ನಾಲ್ಕು ಅವಧಿಗೆ ಶಾಸಕರಾದ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರನ್ನಾಗಿ ನೇಮಕ ಮಾಡಲಾಗಿದೆ. ಜೊತೆಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ಪರಿಶಿಷ್ಟ ಪಂಗಡ ಅಭಿ ವೃದ್ಧಿ ನಿಗಮಕ್ಕೆ ಹಾಗೂ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರನ್ನು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ.
ಬಸನಗೌಡ ದದ್ದಲ್ ಹಾಗೂ ಬಸನಗೌಡ ತುರುವಿಹಾಳ ಎರಡನೇ ಅವಧಿಗೆ ಶಾಸಕರಾಗಿದ್ದಾರೆ.ರಾಜ್ಯ ಸರ್ಕಾರ ಶುಕ್ರವಾರ ಜಿಲ್ಲೆಯ ಮೂವರು ಶಾಸಕ ರನ್ನು ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದ್ದು ಆ ಮೂಲಕ ಸಂಪುಟದ ದರ್ಜೆಯ ಸ್ಥಾನ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆದರೆ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು 4 ಬಾರಿ ಶಾಸಕರಾಗಿದ್ದು, ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!