Saturday, 27th July 2024

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್​ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಜೂನ್​ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.

ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

 SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ

  • 25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ
    -ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT)
  • 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ
  • 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ
  • 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
  • 03-04-2024 ಅರ್ಥಶಾಸ್ತ್ರ ಪರೀಕ್ಷೆ
  • ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ

  • 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
  • 04-03-2024 ಸೋಮವಾರ ಗಣಿತ ಪರೀಕ್ಷೆ
  • 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
  • 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
  • 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
  • 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
  • 11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
  • 13-03-2024 ರಂದು ಇಂಗ್ಲಿಷ್ ಪರೀಕ್ಷೆ
  • 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
  • 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
  • 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
  • 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
  • 22-03-2024 ರಂದು ಹಿಂದಿ ಪರೀಕ್ಷೆ
  • ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ

Leave a Reply

Your email address will not be published. Required fields are marked *

error: Content is protected !!