Friday, 2nd June 2023

ಸಚಿವರ ಮುಂದೆಯೇ ಸ್ವಾಮೀಜಿ ಆತ್ಮಹತ್ಯೆ ಯತ್ನ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣ ಪೋಲೀಸರು ಸ್ವಾಮೀಜಿ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡು ಅನಾಹುತ ತಪ್ಪಿಸಿದ್ದಾರೆ.

ತನಗೆ ನ್ಯಾಯಯುತವಾಗಿ ಸಿಗಬೇಕಿದ್ದ ಪೀಠಾಧಿಕಾರ ಕೈತಪ್ಪಿದೆ ಎಂದು ಸ್ವಾಮೀಜಿ ಸಚಿವರ ಬಳಿ ಅಳಲು ತೋಡಿಕೊಂಡಿದ್ದಾರೆ. ಪಕ್ಷದ ಕಚೇರಿ ಸಮೀಪ ನಡೆದ ಅಹಿತಕರ ಘಟನೆಯಿಂದಾಗಿ ಸಚಿವ ರಾಮುಲು ಕಕ್ಕಾಬಿಕ್ಕಿಯಾಗಿದ್ದರು.

 

error: Content is protected !!