Saturday, 27th July 2024

ಹಿಜಾಬ್ ಸಮರ: ಟಿಸಿ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳ

ಮಂಗಳೂರು: ಕಾಲೇಜು ಮತ್ತು ತರಗತಿ ಯೊಳಗೆ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ ವಿದ್ಯಾರ್ಥಿನಿಯರು ಟಿಸಿ ಪಡೆಯಬಹುದೆಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪಿಎಸ್ ಯಡಪಡಿತ್ತಾಯ ಹೇಳಿದ ಬೆನ್ನಲ್ಲೇ ಕಾಲೇಜು ಗಳಿಂದ ಟಿಸಿ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲೆಯ ಸುಮಾರು 16% ವಿದ್ಯಾರ್ಥಿನಿಯರು ಕಾಲೇಜು ಗಳಿಂದ ವರ್ಗಾವಣೆ ಪತ್ರ ಪಡೆದಿದ್ದಾರೆ ಎಂಬ ಮಾಹಿತಿಯನ್ನು ಶಿಕ್ಷಣ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ವಿದ್ಯಾರ್ಥಿನಿಯರು ಟಿಸಿ ಪಡೆದಿರುವ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಎರಡನೇ, ಮೂರನೇ, ನಾಲ್ಕನೇ ಹಾಗೂ ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿನಿಯರು ಟಿಸಿ ಪಡೆದು ಹೊರನಡೆದಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ 39 ಸರಕಾರಿ ಕಾಲೇಜುಗಳಿದ್ದರೆ, 36 ಅನುದಾನಿತ ಕಾಲೇಜುಗಳಿವೆ. ಸರಕಾರಿ ಕಾಲೇಜಿನಿಂದ 34%, ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರು ವರ್ಗಾವಣೆ ಪತ್ರ ಪಡೆದಿದ್ದಾರೆ ಎಂದು ಆರ್ ಟಿ ಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ ನೀಡಿದೆ.

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ, ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಟಿಸಿ ಪಡೆದಿದ್ದೇವೆ. ಈ ಎಲ್ಲಾ ಘಟನೆಗಳಿಗೆ ಕಾರಣ ಸಚಿವ ಬಿ.ಸಿ ನಾಗೇಶ್ ಆಗಿದ್ದಾರೆ. ಹಲವು ಸರಕಾರಿ ಕಾಲೇಜುಗಳು ಮುಚ್ಚ ಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ” ಎಂದು ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿ ಹೇಳಿದ್ದಾರೆ.

ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ, ವಿದ್ಯಾರ್ಥಿನಿಯರು ಮೊದಲೇ ಈ ತೀರ್ಮಾನ ಕೈಗೊಂಡಿದ್ದರೆ,ಇಷ್ಟು ದೊಡ್ಡ ವಿವಾದ ಆಗುತ್ತಿರಲಿಲ್ಲ. ಹಿಜಾಬ್‌ಗೆ ಅವಕಾಶ ಇರುವ ಕಾಲೇಜುಗಳಿಗೆ ಹೋಗಲಿ ಎಂದು ಹೇಳಿದ್ದಾರೆ.

error: Content is protected !!