ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಜಾರಿಗೊಳಿಸಿರುವ ನಿರ್ಬಂಧಗಳು ಜ.19ಕ್ಕೆ ಅಂತ್ಯವಾಗಲಿವೆ. ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಮತ್ತು ಸಚಿವರು ಮಾಹಿತಿ ನೀಡಲಿದ್ದಾರೆ. ನೈಟ್ ಕಫ್ರ್ಯೂ , ವೀಕೆಂಡ್ ಕಫ್ರ್ಯೂ ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.
1ರಿಂದ 9 ನೇ ತರಗತಿ ಶಾಲೆಗಳನ್ನು ಬಂದ್ ಮಾಡುವ ಚರ್ಚೆ ಸಾಧ್ಯತೆ ಇದೆ. ಕಠಿಣ ನಿಯಮಗಳನ್ನು ಮುಂದುವರಿಸುವ ಔಚಿತ್ಯ ಮತ್ತು ಫೆಬ್ರವರಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.
ರಾತ್ರಿ ನಿಷೇಧಾಜ್ಞಾ, ವಾರಾಂತ್ಯದ ನಿಷೇಧಾಜ್ಞಾ, ಸಿನಿಮಾ ಮಂದಿರ, ರೆಸ್ಟೋರೆಂಟ್ ಸೇರಿ ಎಲ್ಲಾ ಕಡೆ ಶೇ. 50ರ ನಿಯಮ ಜಾರಿ, ಮದುವೆ ಸಮಾರಂಭಗಳಿಗೆ ಜನರ ಮಿತಿ ಹೇರಲಾಗಿದೆ. ಶಾಲೆ ಬಂದ್ ಮಾಡುವ ಜವಾಬ್ದಾರಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಿದೆ.
ಆದರೂ ಕೋವಿಡ್ ಸೋಂಕು ಪ್ರಕರಣಗಳು ನಿತ್ಯ 30 ಸಾವಿರ ಸಂಖ್ಯೆ ದಾಟಿದ್ದು, ಆತಂಕ ಮೂಡಿಸಿದೆ. ಈ ಕುರಿತು ಮಹತ್ವದ ಸಮಾಲೋಚನೆ ನಡೆಯಲಿದೆ.