Saturday, 10th June 2023

ತುಂಗಭದ್ರಾ ಜಲಾಶಯಕ್ಕೆ 86 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Tngabhadra

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ನದಿಗೆ 30 ಕ್ರಸ್ಟ್ ಗೇಟ್ ಗಳ ಮೂಲಕ 86 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ.‌ ಸಂಜೆ ಹೊತ್ತಿಗೆ 33 ಗೇಟ್ ಗಳನ್ನು ಓಪನ್ ಮಾಡಲಾಗುವುದು ಎಂದು ತುಂಗಭದ್ರಾ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ನದಿಗೆ ನೀರು ಬಿಟ್ಟಿರುವ ಕಾರಣ ನದಿ ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆಯೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ಅತ್ತ ಹಂಪಿಯ ಸ್ಮಾರಕಗಳು ಮುಳುಗಡೆಯಾಗಿವೆ. ಪುರಂದರ ದಾಸರ ಮಂಟಪ‌ ಜಲಾವೃತವಾಗಿದೆ.

error: Content is protected !!