Thursday, 22nd February 2024

ಯು.ಆರ್.ಸಭಾಪತಿ ಅನಾರೋಗ್ಯದಿಂದ ವಿಧಿವಶ

ಡುಪಿ : ಉಡುಪಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್.ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ  ಉಡುಪಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕರಾವಳಿ ಕ್ಷೇತ್ರದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಯು.ಆರ್.ಸಭಾಪತಿ, ಉಡುಪಿಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. ಇನ್ನು 2004ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ಧ ಸೋತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಭಾಪತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!