Wednesday, 6th December 2023

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು.

ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದರು.

ಸಿನಿಮಾ‌ ವೀಕ್ಷಣೆ ಬಳಿಕ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರ ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ. ಹೆಗ್ಗಡೆ ಅವರ ಪತ್ನಿ ಡಾ.ಹೇಮಾವತಿ ಹೆಗ್ಗಡೆ, ಮೊಮ್ಮಗಳು ಮಾನ್ಯ ಸೇರಿದಂತೆ ಕುಟುಂಬಸ್ಥರೊಂದಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಚಿತ್ರ ವೀಕ್ಷಣೆ ಮಾಡಿದ್ದಾರೆ.
ಜಾತಿ ಮತ ಬೇಧ ಮರೆತು ಸಹಬಾಳ್ವೆ ಮಾಡಬೇಕೆಂಬ ಸಂದೇಶ ಈ ಚಿತ್ರದಲ್ಲಿ ಇದೆ. ಕಾಂತಾರಾ ಚಿತ್ರ ನೋಡಿ ಬಹಳ ಸಂತೋಷ ವಾಗಿದೆ. ಚಿತ್ರ ನೋಡಿದ ಬಳಿಕ ಮೂಡ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲಾ ಕಲಾವಿದರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ,” ಎಂದು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

error: Content is protected !!