ಕೊಡಗು : ಕೊಡಗು ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಟ್ಟ, ಗುಡ್ಡ, ತಗ್ಗು ಪ್ರದೇಶದ ನಿವಾಸಿಗಳು ಎಚ್ಚರ ದಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆಪ್ಟೆಂಬರ್ 15 ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.